ಅಮೆರಿಕಕ್ಕೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಮೆರಿಕಕ್ಕೆ ತೆರಳಿದರು. ನಾಳೆಯಿಂದ ಜೂನ್ 24ರವರೆಗೆ ಪ್ರಧಾನಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಅಧ್ಯಕ್ಷ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ. ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್‌ನ ವಿಶ್ವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಯುಎಸ್ ಕಾಂಗ್ರೆಸ್ ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.